Thursday, April 25, 2024
spot_imgspot_img
spot_imgspot_img

*ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್*

- Advertisement -G L Acharya panikkar
- Advertisement -

ನವದೆಹಲಿ: ಸಂಸದೆ, ಬಿಜೆಪಿ ನಾಯಕಿ ಸಾಧ್ವಿ ಪ್ರಜ್ಞಾ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರೆಟಿನಾ ಹಿಂಭಾಗದಲ್ಲಿ ಕಾಣಿಸಿಕೊಂಡಿರುವ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜ್ಞಾ ಸಿಂಗ್ ಅವರು ಕೆಲ ತಿಂಗಳುಗಳಿಂದ ಏಮ್ಸ್​ ಆಸ್ಪತ್ರೆಯಲ್ಲಿ ರೆಟಿನಾ ಸಂಬಂಧಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ದಿನಗಳ ಹಿಂದೆ ಅದಕ್ಕೆಂದೇ ಏಮ್ಸ್​ಗೆ ತೆರಳಿದ್ದರು. ಆದರೆ ಆ ಸಮಯದಲ್ಲಿ ತಪಾಸಣೆ ನಡೆಸಿರುವ ವೈದ್ಯರು, ಪ್ರಜ್ಞಾ ಅವರಿಗೆ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದಾರೆ ಎನ್ನಲಾಗಿದೆ.

ಪ್ರಜ್ಞಾ ಅವರ ಕೊರೋನಾ ಪರೀಕ್ಷೆ ಮಾಡಲಾಗಿದೆ. ವರದಿ ನೆಗೆಟಿವ್​ ಬಂದಿದೆ. ಆದರೆ ಅವರು ಸಂಪೂರ್ಣವಾಗಿ ಗುಣವಾಗುವವರೆಗೂ ಆಸ್ಪತ್ರೆಯಲ್ಲೇ ಇರಬೇಕಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿರುವ ಕಾರಣದಿಂದ ಅವರು ಎನ್​ಐಎ ಕೋರ್ಟ್’ಗೆ ಹಾಜರಾಗಿಲ್ಲ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!