Sunday, June 7, 2026
spot_imgspot_img
spot_imgspot_img

ಸಜೀಪ: ಕಾಲು ಜಾರಿ ಹೊಂಡಕ್ಕೆ ಬಿದ್ದು ಯುವಕ ಮೃತ್ಯು..!

- Advertisement -
- Advertisement -

ಸಜೀಪ: ಯುವಕನೋರ್ವ ಕಾಲು ಜಾರಿ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಸಜೀಪದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ.

ಉಳ್ಳಾಲ ತಾಲೂಕಿನ ಇರಾ ಸಮೀಪದ ಸೂತ್ರಬೈಲು ನಿವಾಸಿ ಉಮ್ಮರ್ ಅವರ ಪುತ್ರ ಅಬ್ದುಲ್ ಅಮೀರ್ (23) ಮೃತಪಟ್ಟ ಯುವಕ.

ಅಮೀ‌ರ್ ಕೂಲಿ ಕೆಲಸ ಮಾಡಿಕೊಂಡಿದ್ದು, ಸೆ. 20ರಂದು ಸಂಜೆ ಶಂಶೀರ್, ಇಟ್ಬಾಲ್ ಮತ್ತು ರಿಜ್ವಾನ್ ಅವರ ಜತೆ ಸಜೀಪಮೂಡ ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಕೆಲಸಕ್ಕೆ ಹೋಗಿದ್ದು, ಸಂಜೆ ಕೆಲಸ ಮುಗಿಸಿ ಅಲ್ಲೇ ಸಮೀಪದಲ್ಲಿದ್ದ ನೀರು ತುಂಬಿದ್ದ ಹೊಂಡಕ್ಕೆ ಕೈಕಾಲು ಮುಖ ತೊಳೆಯಲು ಹೋದ ವೇಳೆ ಘಟನೆ ನಡೆದಿದೆ.

- Advertisement -

Related news

error: Content is protected !!