Saturday, August 8, 2026
spot_imgspot_img
spot_imgspot_img

ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಮಾರಾಟ – ಆರೋಪಿಯ ಬಂಧನ

- Advertisement -
- Advertisement -

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಳಗಾವಿಯ ಪೊಲೀಸರು ಬಂಧಿಸಿದ್ದಾರೆ.

ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ಈ ಘಟನೆ ನಡೆದಿದೆ. ಭೋಲು ಪ್ರಜಾಪತಿ ಎಂಬಾತ ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ತುಂಬಿಸಿ ಚಾಕ್ಲೆಟ್ ರೂಪದಲ್ಲಿ ಮಾರಾಟ ಮಾಡುತ್ತಿದ್ದ. ಮಾಹಿತಿ ತಿಳಿದ ತಕ್ಷಣ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ 54 ಸಾವಿರ ರೂಪಾಯಿ ಮೌಲ್ಯದ 6 ಕೆಜಿ ಗಾಂಜಾ, ಒಂದು ಫೋನ್ ಹಾಗೂ ಸ್ಕೂಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು 94 ಸಾವಿರ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಈ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!