- Advertisement -
- Advertisement -



ಬೆಂಗಳೂರು: ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ಕಳಪೆ ಗುಣಮಟ್ಟದ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ರಾಜರಾಜೇಶ್ವರಿನಗರ ನಿವಾಸಿ ನರಸಿಂಹರಾಜು (38) ಎಂದು ಗುರುತಿಸಲಾಗದೆ.
ಆರೋಪಿ ಪ್ರತಿಷ್ಠಿತ ನೈಕ್, ಪೂಮಾ, ಅಡಿದಾಸ್ ಸೇರಿ ಆರು ಕಂಪನಿಗಳ ಹೆಸರಿನಲ್ಲಿ ಕಳಪೆ ಗುಣಮಟ್ಟದ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದ. ಈ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಬಿಇಎಂಎಲ್ ಲೇಔಟ್ ನಲ್ಲಿರುವ ಆತನ ಅಂಗಡಿ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ನಕಲಿ ಬಟ್ಟೆಗಳನ್ನು ಅಸಲಿ ಕಂಪನಿಯ ಬಟ್ಟೆಗಳೆಂದು ಮಾರಾಟ ಮಾಡುತ್ತಿದ್ದ ಎಂಬುದು ತಿಳಿದು ಬಂದಿದೆ.
ಆರೋಪಿಯಿಂದ 1.38 ಕೋಟಿ ರೂ. ಮೌಲ್ಯದ ಕಳಪೆ ಗುಣಮಟ್ಟದ ಬಟ್ಟೆಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಯ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಹಕ್ಕುಸ್ವಾಮ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.
- Advertisement -








