Wednesday, July 22, 2026
spot_imgspot_img
spot_imgspot_img

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ; ಅಪಾಯದಿಂದ ಪಾರು..!

- Advertisement -
- Advertisement -

ಉಪ್ಪಿನಂಗಡಿ: ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಪಕ್ಕದ ಅಂಗಡಿಗೆ ನುಗ್ಗಿದ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

ಬೆಂಗಳೂರಿಗೆ ಕೆಂಪು ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯ ಸ್ಟೇರಿಂಗ್ ಗುಂಡ್ಯ ಸಮೀಪ ಶಿರಾಡಿ ಗ್ರಾಮದ ಅಡ್ಡಹೊಳೆ ಸೇತುವೆ ದಾಟಿ ಹೋಗುತ್ತಿದ್ದಂತೆ ಕಟ್ ಆಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಲಾರಿ ಹೆದ್ದಾರಿ ಪಕ್ಕದ ಟಯರ್ ಪಂಚ‌ರ್ ಅಂಗಡಿ ಹಾಗೂ ಹೊಟೇಲ್‌ಗೆ ನುಗ್ಗಿದೆ. ಈ ವೇಳೆ ಅಂಗಡಿಯಲ್ಲಿ ಇಬ್ಬರು ಮಹಿಳೆಯರಿದ್ದರು. ಅಪಾಯದ ಅರಿವಾಗುತ್ತಿದ್ದಂತೆ ಅವರು ಅಲ್ಲಿಂದ ಓಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದಾಗಿ ಎರಡು ಅಂಗಡಿಗಳಿಗೆ ಹಾನಿಯಾಗಿದೆ. ಲಾರಿ ಚಾಲಕ ಕಾರ್ತಿಕ್ ಅಪಾಯದಿಂದ ಪಾರಾಗಿದ್ದಾರೆ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!