Monday, June 22, 2026
spot_imgspot_img
spot_imgspot_img

‘ಸಮಸ್ತ’ ವಿದ್ಯಾಭ್ಯಾಸ ಬೋರ್ಡ್ ಸದಸ್ಯರಾಗಿ ರಫೀಕ್ ಹಾಜಿ ನೇರಳಕಟ್ಟೆ ಆಯ್ಕೆ

- Advertisement -
- Advertisement -

ವಿಟ್ಲ: ದೇಶದ ಇಸ್ಲಾಮಿಕ್ ಧಾರ್ಮಿಕ ಶಿಕ್ಷಣ ಮಂಡಳಿಯಾದ ‘ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್’ (ಎಸ್ಕೆಐಎಂವಿಬಿ) ಇದರ ಕೇಂದ್ರೀಯ ಸದಸ್ಯರಾಗಿ ಕರ್ನಾಟಕದಿಂದ ದ.ಕ.ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ಹಾಜಿ ನೇರಳಕಟ್ಟೆ ಅವರು ಆಯ್ಕೆಯಾಗಿದ್ದಾರೆ.

ವಿವಿಧ ರಾಜ್ಯಗಳ ಪ್ರತಿನಿಧಿಗಳಿರುವ ಈ ಶಿಕ್ಷಣ ಮಂಡಳಿಯ ಅಧೀನದಲ್ಲಿ ಹತ್ತು ಸಾವಿರಕ್ಕೂ ಮಿಕ್ಕಿದ ಮದ್ರಸಗಳು ಕಾರ್ಯಾಚರಿಸುತ್ತಿದೆ.

ರಫೀಕ್ ಹಾಜಿಯವರು ದೀರ್ಘಕಾಲದಿಂದ ದ.ಕ.ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ನ ಪ್ರಧಾನ ಕಾರ್ಯದರ್ಶಿಯಾಗಿ, ಮದ್ರಸ ಮ್ಯಾನೇಜ್ ಮೆಂಟ್ ನ ಕೇಂದ್ರೀಯ ಉಪಾಧ್ಯಕ್ಷರಾಗಿ, ಪುತ್ತೂರು ರೇಂಜ್ ಮದ್ರಸ ಮ್ಯಾನೇಜ್ ಮೆಂಟ್ ನ ಅಧ್ಯಕ್ಷರಾಗಿ ಹಾಗೂ ಹಲವಾರು ಸಂಘ ,ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

- Advertisement -

Related news

error: Content is protected !!