Tuesday, June 16, 2026
spot_imgspot_img
spot_imgspot_img

ಕೆ ಜಿ ಹಳ್ಳಿ ಮತ್ತು ಡಿ.ಜೆ. ಹಳ್ಳಿ ಪ್ರಕರಣ – ಮಾಜಿ ಮೇಯರ್ ಸಂಪತ್ ರಾಜ್ ಗೆ ಜಾಮೀನು

- Advertisement -
- Advertisement -

ಬೆಂಗಳೂರು: ಕೆ ಜಿ ಹಳ್ಳಿ ಮತ್ತು ಡಿ . ಜೆ. ಹಳ್ಳಿಯಲ್ಲಿ ನಡೆದ ಹಿಂಸಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಾಜಿ ಮೇಯರ್ ಸಂಪತ್ ರಾಜ್ ಗೆ ಹೈಕೋರ್ಟ್ ಏಕ ಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.

ಎರಡು ತಿಂಗಳ ಹಿಂದೆ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಸಂಪತ್ ರಾಜ್, ಕೇರಳ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದರು.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಜತೆಗಿನ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -

Related news

error: Content is protected !!