Thursday, September 3, 2026
spot_imgspot_img
spot_imgspot_img

*ತಲೆಮರೆಸಿಕೊಂಡಿದ್ದ ಮಾಜಿ ಮೇಯರ್ ಸಂಪತ್ ರಾಜ್ ಬಂಧನ*

- Advertisement -
- Advertisement -

ಬೆಂಗಳೂರು: ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಬೆಂಗಳೂರಿನ ಸಿಸಿಬಿ ಸೋಮವಾರ ಬಂಧಿಸಿದೆ. ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೇ ಹಾಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್ ರಾಜ್ ಅವರನ್ನು ಬೆಂಗಳೂರಿನಲ್ಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ತನಿಖೆಯಿಂದ ಆರೋಪ ಸಾಬೀತಾಗುತ್ತಿದ್ದಂತೆ ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಕಳೆದ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ಅವರಿಗಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಬೇರೆ ರಾಜ್ಯಗಳಲ್ಲೂ ಶೋಧ ಮಾಡಿದ್ದರು. ಈಗ ಬೆಂಗಳೂರಿನಲ್ಲೇ ಅವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!