- Advertisement -
- Advertisement -



ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಗಳೂರಿನ ವೈಯ್ಯಾಲಿಕಾವಲ್‌ನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಿರಿಯ ನಟ ಶ್ರೀಶೈಲನ್ ಅವರ ಧರ್ಮಪತ್ನಿ ಶೈಲಜಾ ಶ್ರೀಶೈಲನ್ ಅವರು, ಪುತ್ರ ಶ್ರೀಕಾಂತ್ ಹಾಗೂ ಪುತ್ರಿ ಶ್ರೀವಾಣಿ ಅವರನ್ನು ಅಗಲಿದ್ದಾರೆ. ‘ಎ’, ‘ಪುಟ್ಟ ಹೆಂಡ್ತಿ’, ‘ಗೃಹಪ್ರವೇಶ’, ‘ಬಾರೆ ನನ್ನ ಮುದ್ದಿನ ರಾಣಿ’, ‘ಅನಂತನ ಅವಾಂತರ’, ‘ಉಪ್ಪಿ 2’ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿದ್ದ ಅವರು, ನಟ ಉಪೇಂದ್ರ ಅವರ ಬಹುತೇಕ ಸಿನಿಮಾಗಳಲ್ಲೂ ತಾಯಿ ಸೇರಿದಂತೆ ಹಲವು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದರು.
‘ಮುಕ್ತ’ ಮತ್ತು ‘ಮಾಯಾಮೃಗ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲೂ ಅಭಿನಯಿಸಿ ಕನ್ನಡ ಕಿರುತೆರೆಯಲ್ಲೂ ತಮ್ಮದೇ ಛಾಪು ಮೂಡಿಸಿದ್ದರು. ಇಂದು ಶ್ರೀರಾಂಪುರದ ವಿದ್ಯುತ್ ಚಿತಾಗಾರದಲ್ಲಿ ಅವರ ಅಂತ್ಯಸಂಸ್ಕಾರ ನಡೆಸಲಾಯಿತು ಎಂಬುದಾಗಿ ತಿಳಿದುಬಂದಿದೆ.
- Advertisement -








