Saturday, April 27, 2024
spot_imgspot_img
spot_imgspot_img

ಡೆತ್​ನೋಟ್​ ಬರೆದಿಟ್ಟು ಸ್ಯಾಂಡಲ್​ವುಡ್​ ನಟಿ ಆತ್ಮಹತ್ಯೆ ಶರಣು!

- Advertisement -G L Acharya panikkar
- Advertisement -

ಇತ್ತೀಚೆಗೆ ಸೆಲೆಬ್ರಿಟಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚುತ್ತಿದೆ. ಸ್ಯಾಂಡಲ್​ವುಡ್​ ನಟಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ನಟಿ ಕೊಡಗು ಜಿಲ್ಲೆಯ ಕುಶಾಲನಗರ ಮೂಲದ ಸವಿ ಮಾದಪ್ಪ (ಸೌಜನ್ಯ) (25) ಎನ್ನಲಾಗಿದೆ. ದೊಡ್ಡಬೆಲೆ ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ಸೌಜನ್ಯ ಹಾಗೂ ಅವರ ಬಾಯ್‌ಫ್ರೆಂಡ್‌ ವಿವೇಕ್ ಜತೆ ವಾಸವಿದ್ದರು. ಸೌಜನ್ಯ ಊಟ ತರುವಂತೆ ಬಾಯ್‌ಫ್ರೆಂಡ್‌ಗೆ ಹೇಳಿದ್ದರು. ವಿವೇಕ್ ಊಟ ತರೋಕೆ ಹೊರಗೆ ಹೋಗಿದ್ದ ವೇಳೆ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಚೌಕಟ್ಟು’, ‘ಫನ್’ ಸಿನಿಮಾದಲ್ಲಿ ನಟಿಸಿದ್ದರು.

ಇತ್ತೀಚೆಗೆ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಒಂದನ್ನು ಹಾಕಿಕೊಂಡಿದ್ದರು. ‘ನಿಮ್ಮ ಜೀವನದ ಬಗ್ಗೆ ಹಾಗೂ ಗುರಿ ಬಗ್ಗೆ ಹೆಚ್ಚು ಫೋಕಸ್​ ಮಾಡಿದರೆ ನೀವು ನಿಮ್ಮ ಜೀವನದಲ್ಲಿ ಸಾಕಷ್ಟು ಜನರನ್ನು ಕಳೆದುಕೊಳ್ಳಬೇಕಾಗುತ್ತದೆ’ ಎಂದು ಅವರು ಬರೆದುಕೊಂಡಿದ್ದರು. ಇದಾದ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!