Friday, March 29, 2024
spot_imgspot_img
spot_imgspot_img

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣದ 10ನೇ ಆರೋಪಿಯ ಬಂಧನ

- Advertisement -G L Acharya panikkar
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣದ 10ನೇ ಆರೋಪಿ ಅಶ್ವಿನ್ ಭೋಗಿ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಸಂಬಂಧ ಸಿಸಿಬಿ ಎಸಿಪಿ ಗೌತಮ್ ನೀಡಿದ್ದ ದೂರಿನನ್ವಯ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ಇದನ್ನು ತಿಳಿದ ಆರೋಪಿ ತಲೆಮರೆಸಿಕೊಂಡು ಚಿಕ್ಕಮಗಳೂರಿನಲ್ಲಿ ಅಡಗಿ ಕೂತಿದ್ದ ಎನ್ನಲಾಗಿದೆ.


ಸತತ ಒಂದು ತಿಂಗಳು ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಆರೋಪಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರಿಗೆ ಹೋಗಿ ಆರೋಪಿಯನ್ನು ಬಂಧಿಸಿ ಕರೆತಂದಿದ್ದಾರೆ.

- Advertisement -

Related news

error: Content is protected !!