- Advertisement -
- Advertisement -
ನವದೆಹಲಿ: ಮಾದಕ ದ್ರವ್ಯ ಜಾಲದ ನಂಟಿನ ಆರೋಪದ ಹಿನ್ನೆಲೆಯಲ್ಲಿ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.

ನ್ಯಾಯಮೂರ್ತಿ ವಾರಿಂಗ್ಟನ್ ನೇತೃತ್ವದ ತ್ರಿಸದಸ್ಯ ಪೀಠ ಈ ಕುರಿತು ವಿಚಾರಣೆ ನಡೆಸಲಿದೆ. ಈ ಹಿಂದೆ ಜಾಮೀನು ಕೋರಿ ನಟಿ ರಾಗಿಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕಿತ್ತು. ಈ ಹಿನ್ನೆಲೆಯಲ್ಲಿ ರಾಗಿಣಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಮಾದಕ ದ್ರವ್ಯ ಜಾಲದ ನಂಟಿನ ಆರೋಪಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾ ಅವರನ್ನು ಸಿಸಿಬಿ ಬಂಧಿಸಿದೆ. ಇಬ್ಬರು ನಟಿಯರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.




- Advertisement -








