Tuesday, March 2, 2021

ಸಂಜನಾ ಬಲವಂತವಾಗಿ ಮತಾಂತರ: ಮೌಲ್ವಿ ವಿರುದ್ಧ ದೂರು

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಾಗಿಯಾಗಿ ಜೈಲು ಸೇರಿದ್ದ ನಟಿ ಸಂಜನಾ ಗರ್ಲಾನಿ ಇದೀಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಜನಾ ಬಲವಂತವಾಗಿ ಮತಾಂತರ ಗೊಂಡಿದ್ದಾರೆನ್ನುವ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅರ್ಚನಾ ಮನೋಹರ್ ಗರ್ಲಾನಿ ಅವರನ್ನು ಟ್ಯಾನರಿ ರೋಡ್ ನ ದಾರುಲ್ ಉಲುಮ್ ಶಾ ವಲಿಯುಲ್ಲಾದ ಮೌಲ್ವಿಯೋರ್ವರು ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿದ್ದರು. ಸಂಜನಾ ಅವರನ್ನು ಬಲವಂತವಾಗಿ ಮತಾಂತರಗೊಳಿಸಿದ್ದಾರೆನ್ನುವ ಕುರಿತು ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರ ಬೆನ್ನಲ್ಲೇ ಮೌಲ್ವಿ ವಿರುದ್ದ ವಲೀಕರಾದ ಅಮೃತೇಶ್ ಎಂಬವರು ಕಾಟನ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಂಜನಾ ಅವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿದ ಬಳಿಕ ಮಹಿರಾ ಎಂದು ನಾಮಕರಣ ಮಾಡಲಾಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನಟಿ ಸಂಜನಾ ಬಲವಂತದ ಮತಾಂತರದ ಕುರಿತು ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ. ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸಂಜನಾ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಇಂದು ಅವರು ಮನೆಗೆ ಬರುವ ಸಾಧ್ಯತೆಯಿದೆ.

- Advertisement -

MOST POPULAR

HOT NEWS

Related news

error: Content is protected !!