Friday, March 29, 2024
spot_imgspot_img
spot_imgspot_img

ರಾಗಿಣಿ – ಸಂಜನಾ ಡ್ರಗ್ಸ್ ಮಾಫಿಯಾ ತನಿಖೆಗೆ ಎಂಟ್ರಿಕೊಟ್ಟ ‘ಇಡಿ ‘

- Advertisement -G L Acharya panikkar
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದ ತನಿಖೆಗೀಗಿ ಇಡಿ (ಜಾರಿ ನಿರ್ದೇಶನಾಲಯ) ಎಂಟ್ರಿ ಕೊಟ್ಟಿದೆ. ಡ್ರಗ್ಸ್ ಕಿಂಗ್ ಪಿಗ್ ವೀರೇಶ್ ಖನ್ನಾನನ್ನು ವಿಚಾರಣೆಗೆ ಒಳಪಡಿಸಿರುವ ಇಡಿ, ರಾಗಿಣಿ ಮತ್ತು ಸಂಜನಾಗೆ ಬಿಗ್ ಶಾಕ್ ಕೊಟ್ಟಿದೆ.

ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಒಂದು ಕಡೆ ಎನ್ ಸಿಬಿ ಇನ್ನೊಂದು ಕಡೆ ಸಿಸಿಬಿ ತನಿಖೆಯನ್ನು ನಡೆಸುತ್ತಿದೆ. ಈಗಾಗಲೇ 14 ಮಂದಿಯ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಸಿಸಿಬಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದೆ. ವಿಚಾರಣೆಯ ವೇಳೆಯಲ್ಲಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.

ಈ ನಡುವಲ್ಲೇ ನಟಿಯರಿಗೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ಭಯ ಶುರುವಾಗಿದೆ. ಅಕ್ರಮ ಹಣ ವರ್ಗಾವಣೆ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಇಡಿ ಅಧಿಕಾರಿಗಳು ಆಗಮಿಸಿ, ಸಂದೀಪ್ ಪಾಟೀಲ್ ರನ್ನು ಭೇಟಿ ಮಾಡಿದ್ದಾರೆ. ಡ್ರಗ್ಸ್ ಡೀಲ್ ನಲ್ಲಿ ಸಾಕಷ್ಟು ಅಕ್ರಮ ಹಣ ಹರಿದಾಡಿದೆ. ಈ ಬಗ್ಗೆ ಇಡಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿಕೊಂಡಿದ್ದರು.

ಬೆಂಗಳೂರು, ಗೋವಾ ಹಾಗೂ ಶ್ರೀಲಂಕಾದಲ್ಲಿ ನಡೆಯುತ್ತಿದ್ದ ಪಾರ್ಟಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ಹರಿದುಬರುತ್ತಿರುವ ಮೂಲವನ್ನು ಕೆದಕಲು ಜಾರಿ ನಿರ್ದೇಶನಾಲಯ ಮುಂದಾಗಿದೆ. ಡ್ರಗ್ಸ್ ಮಾಫಿಯಾದಲ್ಲಿ ಈಗಾಗಲೇ ಸ್ಯಾಂಡಲ್ ವುಡ್ ನಟ, ನಟಿಯರು, ಉದ್ಯಮಿ ಹಾಗೂ ಸೆಲೆಬ್ರಿಟಿಗಳ ಹೆಸರು ಕೇಳಿಬಂದಿರುವ ಬೆನ್ನಲ್ಲೇ ಡ್ರಗ್ಸ್ ದಂಧೆಯಿಂದ ವಿದೇಶಕ್ಕೆ ಹಣ ಹರಿದಿದೆ ಅನ್ನೋ ಮಾತುಗಳು ಕೇಳಿಬಂದಿದೆ. ಇಡಿ ಅಧಿಕಾರಿಗಳು ಈಗಾಗಲೇ ಸಿಸಿಬಿ ಅಧಿಕಾರಿಗಳಿದ ಮಾತಿಯನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ವೀರೇಶ್ ಖನ್ನಾನನ್ನು ವಿಚಾರಣೆ ನಡೆಸುತ್ತಿದ್ದಾರೆ.

ನಟಿ ಸಂಜನಾ ಹಾಗೂ ರಾಗಿಣಿ ಅವರನ್ನು ಸಿಸಿಬಿ ಅಧಿಕಾರಿಗಳು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಡ್ರಗ್ಸ್ ಸೇವನೆಯ ಕುರಿತಂತೆ ಈ ತಪಾಸಣೆಯನ್ನು ನಡೆಸಲಾಗುತ್ತಿದೆ. ಸಿಸಿಬಿ ವಶದಲ್ಲಿರುವ ರಾಗಿಣಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಈಗಾಗಲೇ ವಜಾಗೊಳಿಸಿದೆ. ಅಲ್ಲದೇ ಸಂಜನಾ ಅವರನ್ನು ಕೂಡ ಪ್ರಕರಣದ 14ನೇ ಆರೋಪಿಯನ್ನಾಗಿಸಲಾಗಿದೆ.

ಸಿಸಿಬಿ ಕಸ್ಟಡಿ ಅವಧಿ ಮುಗಿಯುತ್ತಿದ್ದಂತೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆಯುವ ಭೀತಿ ಎದುರಾಗಿದೆ. ನಟಿಯರು ಅಪಾರ ಪ್ರಮಾಣದಲ್ಲಿ ಆಸ್ತಿಯನ್ನು ಹೊಂದಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಇನ್ನೊಂದೆಡೆ ವಿದೇಶದಿಂದ ಹಣ ಹರಿದುಬಂದಿರುವುದರ ಹಿಂದೆ ಅಕ್ರಮದ ವಾಸನೆ ಕೇಳಿಬಂದಿದೆ. ಈ ಹಿನ್ನೆಲೆಯಲ್ಲೀಗ ನಟಿ ಮಣಿಯರಿಗೆ ಹವಾಲಾ ಭೀತಿ ಎದುರಾಗಿದೆ.

- Advertisement -

Related news

error: Content is protected !!