- Advertisement -
- Advertisement -





ಕಾರ್ಕಳ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ.
ಮುದ್ದಣ್ಣ ನಗರದ ವಾರಿಜಾ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಬೆಲೆಬಾಳುವ ಉಪಕರಣಗಳು ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಂಡಿವೆ.
- Advertisement -








