Wednesday, April 17, 2024
spot_imgspot_img
spot_imgspot_img

ಆ. 25 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಪ್ತಪದಿ ಸಾಮೂಹಿಕ ವಿವಾಹ

- Advertisement -G L Acharya panikkar
- Advertisement -

ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.೨೫ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ದೇಗುಲದ ಕಚೇರಿಯಿಂದ ಅರ್ಜಿ ಫಾರಂ ಪಡೆದು ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

ಕನ್ಯಾ ಲಗ್ನ ಸುಮೂಹುರ್ತ
ಆ.೨೫ರಂದು ಬೆಳಗ್ಗೆ 9:00 ರಿಂದ 9:50 ರ ವರೆಗೆ ನೆರವೇರುವ ಕನ್ಯಾ ಲಗ್ನ ಸುಮೂಹುರ್ತದಲ್ಲಿ ವಿವಾಹ ನೆರವೇರಲಿದೆ. ಆ.4 ವಧು-ವರರು ನಿಗದಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆ.೮ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು. ಆ.13 ಅಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾದರೆ, ಆ.15ರಂದು ವಧುವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

ಅಗತ್ಯ ದಾಖಲೆಗಳು:
ವಧು-ವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರ ಪ್ರತಿ, ಪಾಸ್ಪೋರ್ಟ್ ಸೈಜ್‌ನ ೨ ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧು-ವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯತ್‌ನಿಂದ ಅಥವಾ ಸಂಬಂಧಪಟ್ಟ ಸರಕಾರಿ ಇಲಾಖಾಧಿಕಾರಿಗಳಿಂದ ದೃಢಪತ್ರ ವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಸರಳ ಸಾಮೂಹಿಕ ವಿವಾಹವಾಗುವ ವರನಿಗೆ ಶ್ರೀ ದೇವಳದಿಂದ ಪ್ರೋತ್ಸಾಹ ಧನವಾಗಿ ರೂ.5 ಸಾವಿರ ಹಾಗೂ ವಧುವಿಗೆ ರೂ.10 ಸಾವಿರ ನೀಡಲಾಗುವುದು. ಸುಮಾರು ರೂ 40 ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ಭರಿಸಲಾಗುವುದು. ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಆವಶ್ಯಕ ವ್ಯವಸ್ಥೆಗಳನ್ನು ದೇವಳದಿಂದ ಮಾಡಲಾಗುವುದು. ಸರಳ ಸಾಮೂಹಿಕ ವಿವಾಹವಾಗುವ ವಧುವಿಗೆ ಕಂದಾಯ ಇಲಾಖೆಯ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ ರೂ.10 ಸಾವಿರ ನಿಶ್ಚಿತ ಠೇವಣಿ ಸೌಲಭ್ಯವನ್ನು ಒದಗಿಸಲಾಗುವುದು. ವಿವಾಹವಾಗುವ ಪರಿಶಿಷ್ಠ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರಳ ವಿವಾಹ ಯೋಜನೆಯಡಿ ರೂ.50 ಸಾವಿರಗಳನ್ನು ಒದಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 08257 -281224, 236200, 281700, 281423 ಅಥವಾ ಶ್ರೀ ದೇವಳದ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು

- Advertisement -

Related news

error: Content is protected !!