Thursday, June 18, 2026
spot_imgspot_img
spot_imgspot_img

ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಸಸಿಕಾಂತ್ ಸೆಂಥಿಲ್-ಸೆ. 11ಕ್ಕೆ ವಿಚಾರಣೆ

- Advertisement -
- Advertisement -

ಬೆಂಗಳೂರು: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಧರ್ಮಸ್ಥಳ ʻಬುರುಡೆʼಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಕ್ಕಾಗಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಸೆಂಥಿಲ್‌ ಹೇಳಿದ್ದಾರೆ. 42 ಎಸಿಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಪಿಸಿಆರ್ ಫೈಲ್‌ ಮಾಡಿದ್ದು, ಸೆಪ್ಟೆಂಬರ್‌ 11ಕ್ಕೆ ವಿಚಾರಣೆ ನಡೆಯಲಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸೆಂಥಿಲ್‌, ಬುರುಡೆ ಕೇಸ್‌ನಲ್ಲಿ ನನ್ನ ಹೆಸರು ತಗೊಂಡಿದ್ದಾರೆ. ಆದ್ದರಿಂದ ಮೊಕದ್ದಮೆ ಹೂಡಿದ್ದೇನೆ. ಅವರು ಕೋರ್ಟ್‌ನಲ್ಲಿ ಉತ್ತರಿಸಲಿ ಎಂದು ಹೇಳಿದ್ದಾರೆ.

- Advertisement -

Related news

error: Content is protected !!