Monday, May 6, 2024
spot_imgspot_img
spot_imgspot_img

ಯಾದಗಿರಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು – ಪಾಕಿಸ್ತಾನಕ್ಕೆ ಕಾಲ್!

- Advertisement -G L Acharya panikkar
- Advertisement -

ನಗರದಲ್ಲಿ ಮತ್ತೆ ಸ್ಯಾಟಲೈಟ್ ಪೋನ್ ಸದ್ದು ಮಾಡಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟಲೈಟ್ ಫೋನ್ ಮೂಲಕ ಪಾಕಿಸ್ತಾನಕ್ಕೆ ಕರೆ ಹೋಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಸೆಪ್ಟೆಂಬರ್ 17 ರಂದು ಶೆಳ್ಳಗಿ ಗ್ರಾಮದ ಕೃಷಿ ಪ್ರದೇಶವೊಂದರಿಂದ ನಸುಕಿನ ಜಾವ 3 ಗಂಟೆ ಸುಮಾರಿಗೆ ಪಾಕ್‌ಗೆ ಕರೆ ಹೋಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ದಿನದಂದೇ ಸ್ಯಾಟಲೈಟ್ ಪೋನ್ ಕರೆ ಹೋಗಿದ್ದು, ಚೀನಾ ನಿರ್ಮಿತ ಸ್ಯಾಟಲೈಟ್ ಪೋನ್‌ನಿಂದ ಕರೆ ಮಾಡಲಾಗಿದೆ. ಸೆಪ್ಟೆಂಬರ್ 19 ರಂದು ಈ ಬಗ್ಗೆ ಕೇಂದ್ರಕ್ಕೆ ಮಾಹಿತಿ ಸಿಕ್ಕಿದ್ದು, ಜಿಪಿಎಸ್ ಲೊಕೇಶನ್ ಆಧಾರದ ಮೇಲೆ ಕೇಂದ್ರ ಸಂಸ್ಥೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!