Friday, June 5, 2026
spot_imgspot_img
spot_imgspot_img

ನದಿಪ್ರವಾಹಕ್ಕೆ ಸಿಲುಕಿ ಮೃತಪಟ್ಟ ಸತೀಶ್ ಪೂಜಾರಿ ಕುಟುಂಬ ವರ್ಗಕ್ಕೆ ರೂ.5 ಲಕ್ಷ ಪರಿಹಾರ

- Advertisement -
- Advertisement -

ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿಯಾದ ಸತೀಶ್ ಪೂಜಾರಿ ಎಂಬುವರು ಇತ್ತೀಚಿಗೆ ನದಿಪ್ರವಾಹಕ್ಕೆ ಸಿಲುಕಿ ಮೃತಪಟ್ಟಿದ್ದು ಈ ಮನೆಗೆ ಬಂಟ್ವಾಳದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿ ಸರಕಾರದ ವತಿಯಿಂದ ರೂ.5 ಲಕ್ಷ ಪರಿಹಾರದ ಚೆಕ್‌ನ್ನು ಮೃತರ ತಂದೆ ಬಾಬು ಪೂಜಾರಿ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಂದಾಯ ವೃತ್ತ ನಿರೀಕ್ಷಕರಾದ ದಿವಾಕರ ಮುಗುಳಿಯ, ವಿಟ್ಲಪಡ್ನೂರು ಗ್ರಾಮ ಪಂ. ಮಾಜಿ ಅಧ್ಯಕ್ಷರಾದ ಹಾಗೂ ಕ್ಷೇತ್ರದ ಬಿ.ಜೆ.ಪಿ ಪ್ರ.ಕಾರ್ಯದರ್ಶಿ ರವೀಶ್ ಶೆಟ್ಟಿ, ಕನ್ಯಾನ ಗ್ರಾಮ ಪಂ. ಮಾಜಿ ಅಧ್ಯಕ್ಷರಾದ ರಘುರಾಮ ಶೆಟ್ಟಿ, ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ಪ್ರಮುಖರಾದ ಲೋಹಿತ್ ಕೊಳ್ನಾಡು, ಮೋಹನದಾಸ ಶೆಟ್ಟಿ, ಚಂದ್ರಶೇಖರ ಪೂಜಾರಿ, ಗ್ರಾಮ ಸಹಾಯಕ ಪರಮೇಶ್ವರ್ ಉಪಸ್ಥಿತರಿದ್ದರು.

- Advertisement -

Related news

error: Content is protected !!