ಬೆಂಗಳೂರು: ಕೊರೊನಾ ಸೋಂಕನ್ನು ತಡೆಗಟ್ಟಲು ಲಾಕ್ ಡೌನ್ ಪರಿಹಾರ ಅಲ್ಲ. ಪರಿಸ್ಥಿತಿ ನೋಡಿಕೊಂಡು ಶನಿವಾರದ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡಲಾಗುವುದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶನಿವಾರ ಲಾಕ್ ಡೌನ್ ಮಾಡಬೇಕೆ ಬೇಡವೋ ಎಂಬುದರ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಬೇಕಷ್ಟೆ. ಇದು ನನ್ನ ವೈಯುಕ್ತಿಕ ಅಭಿಪ್ರಾಯ.ಜನರ ಸುರಕ್ಷತೆ ದೃಷ್ಟಿಯಿಂದ ಲಾಕ್ ಡೌನ್ ಒಳ್ಳೆಯದು. ಇಲ್ಲಿನ ತನಕ ನಮಗೆ ಲಾಕ್ ಡೌನ್ ಬಗ್ಗೆ ಒಲವು ಇಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಪಿಪಿಇ ಕಿಟ್ ನಲ್ಲಿ ಅವ್ಯವಹಾರ ನಡೆದಿಲ್ಲ:
ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಪಿಪಿಇ ಕಿಟ್ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಅಂತ ಹೇಳಿದರು. ಕೊರೊನಾ ಶುರುವಾದ ಸಂದರ್ಭದಲ್ಲಿ ಇದರ ಬೆಲೆ ಹೆಚ್ಚಿತ್ತು. ಆದ್ರೆ ಇದರ ಪೂರೈಕೆ ಈಗ ಹೆಚ್ಚಾಗಿದ್ದು, ಬೆಲೆ ಕೂಡ ಕಡಿಮೆಯಾಗಿದೆ. ಈ ವಿಚಾರದಲ್ಲಿ ಯಾವುದೇ ಸುಳ್ಳು ದಾಖಲೆ ನೀಡಲು ಆಗಲ್ಲ ಎಂದರು.