Wednesday, September 30, 2026
spot_imgspot_img
spot_imgspot_img

ಸೌಜನ್ಯಾ ಕೇಸ್ ಮರುತನಿಖೆ: ಎಸ್ಐಟಿಯಿಂದ ಕೈಬಿಡುವಂತೆ ಎಎಸ್ಪಿ ವೆಂಕಟೇಶ್ ಪ್ರಸನ್ನ ಮನವಿ

- Advertisement -
- Advertisement -

ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ದಿಂದ ತನ್ನನ್ನು ಕೈಬಿಡುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ(ಎಎಸ್ಪಿ) ವೆಂಕಟೇಶ್ ಪ್ರಸನ್ನ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ.

ತಮ್ಮ ಮೇಲೆ ಸೌಜನ್ಯಾ ಕುಟುಂಬಸ್ಥರು ಅವಿಶ್ವಾಸ ವ್ಯಕ್ತಪಡಿಸಿರುವುದರಿಂದ ತನಿಖಾ ತಂಡದಲ್ಲಿ ಮುಂದುವರಿಯಲು ನೈತಿಕ ಪ್ರಶ್ನೆ ಎದುರಾಗಿದೆ. ಆದ್ದರಿಂದ ತನಿಖಾ ತಂಡದಿಂದ ತನ್ನನ್ನು ಕೈಬಿಡುವಂತೆ ವೆಂಕಟೇಶ್ ಪ್ರಸನ್ನ ಮನವಿ ಮಾಡಿರುವುದಾಗಿ ತಿಳಿದುಬಂದಿದೆ.

2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿ ಸೌಜನ್ಯಾಳನ್ನು ಅತ್ಯಾಚಾರಗೈದು ಕೊಲೆ ನಡೆದಿತ್ತು. ಈ ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಇದೀಗ ಸೂಚಿಸಿ, ಎಸ್‌ಐಟಿ ರಚಿಸಿ, ಮೂರು ತಿಂಗಳೊಳಗೆ ಅನುಸರಣೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್, ಬೆಂಗಳೂರಿನ ಸಿಐಡಿ ಎಸ್ಪಿ ಲೋಕೇಶ್ ಜಗಲಾಸರ್ ಹಾಗೂ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಎಸ್ಪಿ ವೆಂಕಟೇಶ್ ಪ್ರಸನ್ನರನ್ನು ಎಸ್‌ಐಟಿ ಸದಸ್ಯರನ್ನಾಗಿ ನೇಮಿಸಲಾಗಿದ್ದು, ಇದೀಗ ಎಎಸ್ಪಿ ವೆಂಕಟೇಶ್ ಪ್ರಸನ್ನ ತನಿಖಾ ತಂಡದಿಂದ ಹೊರಬರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!