Monday, June 15, 2026
spot_imgspot_img
spot_imgspot_img

ಕುಡಿದ ಅಮಲಿನಲ್ಲಿ ಪತ್ನಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ

- Advertisement -
- Advertisement -

ಸವದತ್ತಿ : ಕುಡಿದ ಅಮಲಿನಲ್ಲಿ ಕಟ್ಟಿಕೊಂಡ ಪತ್ನಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ನಡೆದಿದೆ.

ತಾಲೂಕಿನ ಬೆಟಸೂರು ಗ್ರಾಮದಲ್ಲಿ ವ್ಯಕ್ತಿಯೊರ್ವ ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಆನಂತರ ತಾನೇ ಖುದ್ದಾಗಿ ಪೊಲೀಸರಿಗೆ ಶರಣಾದ ಘಟನೆ ನಡೆದಿದೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಫಕ್ಕಿರಪ್ಪ ವಾರಿಮನಿ (35) ಎಂಬಾತ ಪತ್ನಿ ದೀಪಾಳನ್ನು ಕುಡಿದ ಅಮಲಿನಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ದಂಪತಿಗಳಿಗೆ 5 ವರ್ಷದ ಗಂಡು ಮಗುವಿದೆ. ಸದ್ಯ ಆರೋಪಿಯನ್ನು ವಶದಲ್ಲಿರಿಸಿಕೊಂಡಿರುವ ಪೊಲೀಸರು ಘಟನೆ ಕುರಿತು ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!