Monday, May 20, 2024
spot_imgspot_img
spot_imgspot_img

ಸೇವ್ ಲೈಫ್ ಟ್ರಸ್ಟ್ ವತಿಯಿಂದ ವೆನಲಾಕ್ ಆಸ್ಪತ್ರೆಗೆ 6 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಗಳ ಹಸ್ತಾಂತರ

- Advertisement -G L Acharya panikkar
- Advertisement -

ಮಂಗಳೂರು: ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮುಖಾಂತರ ಹಸ್ತಾಂತರಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಹಾಗೂ ವೈದ್ಯಕೀಯ ಸೌಲಭ್ಯದಿಂದ ವಂಚಿತರಾದ ಜನರಿಗೆ ಸಾಮಾಜಿಕ ಜಾಲತಾಣದ ಮುಖಾಂತರ ಹಣ ಸಂಗ್ರಹಿಸಿ ವೈದ್ಯಕೀಯ ವೆಚ್ಚ ಭರಿಸುತಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

ಕಳೆದ 10 ತಿಂಗಳಿನಲ್ಲಿ 200 ಕ್ಕೂ ಅಧಿಕ ಬೇರೆ ಬೇರೆ ಕಾರಣಗಳಿಗೆ 1.1 ಕೋಟಿಗೂ ಅಧಿಕ ಮೊತ್ತ ಸಹಾಯ ಹಸ್ತ ಚಾಚಿದ್ದು , ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ . ಈ ಬಾರಿ  ಮಂಗಳೂರು , ಬಂಟ್ವಾಳ , ಉಡುಪಿಯ 700 ಕುಟುಂಭಗಳಿಗೆ ಅಗತ್ಯ ವಸ್ತುಗಳ ಕಿಟ್ ಗಳನ್ನು ವಿತರಿಸಲಾಗಿದೆ.

ಮಹಾಮಾರಿಯ ಎರಡನೇ ಅಲೆಯು ವಿಪರೀತವಾಗಿ ಹರಡುತ್ತಿದ್ದು, ರಾಜ್ಯಾದ್ಯಂತ ಕೈ ಮೀರಿಹೋಗಿರುತ್ತದೆ , ಈ ಪರಿಸ್ಥಿತಿಯನ್ನು ಮನಗಂಡು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ನೀಡಲಾಗಿದೆ.

ಈ ಆಕ್ಸಿಜನ್  ಕಾನ್ಸನ್ಟ್ರೇಟರ್ಸ್ ಗಳನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿಗಳು ಮಾತನಾಡಿ ನೀವು ತಮ್ಮ ಸಂಸ್ಥೆಯ ವತಿಯಿಂದ ಸಾರ್ವಜಿಕರಿಗೆ ಉಪಯೋಗವಾಗುವಂತಹ ಸೇವಾ ಕಾರ್ಯ ಮೆಚ್ಚು ವಂಥದದ್ದು , ನೀವು ನೀಡಿದ ರೀತಿಯಂತೆ ಇನ್ನು ಸಾರ್ವಜನಿಕ ಸೇವಾ ಸಂಸ್ಥೆಗಳು ಮುಂದೆ ಬರುವಂತೆ ಆಗಲಿ ಎಂದು ಶುಭ ಹರಿಸಿದರು.

ಬಳಿಕ 6 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಗಳನ್ನು ಡಿ ಎಂ ಓ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕರ್, ಛಾಯಾಗ್ರಾಹಕ ಮಂಜು ನೀರೇಶ್ವಾಲ್ಯ , ರಮೇಶ್ ಶೆಣೈ ಉಪಸ್ಥಿತರಿದ್ದರು .

driving
- Advertisement -

Related news

error: Content is protected !!