Sunday, June 29, 2025
spot_imgspot_img
spot_imgspot_img

SBI ಬ್ಯಾಂಕ್ ಗೆ ಕನ್ನ : ಬ್ಯಾಂಕ್‍ನಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಹೊತ್ತೊಯ್ದ ಕಳ್ಳರು

- Advertisement -
- Advertisement -

ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ (SBI) ದಾವಣಗೆರೆಯ ನ್ಯಾಮತಿ ಶಾಖೆಯ ಲಾಕರ್‌ನಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳರ ಹೊತ್ತೊಯ್ದ ಘಟನೆ ನಡೆದಿದೆ.

ಸುಮಾರು 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಕಳ್ಳರು ದೋಚಿದ್ದು, ಈ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಸುನೀಲ್ ಕುಮಾರ್ ಯಾದವ್ ಪೊಲೀಸರಿಗೆ ದೂರು ನೀಡಿದ್ದಾರೆ.

ನೆಹರು ರಸ್ತೆಯಲ್ಲಿರುವ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಬ್ಯಾಂಕಿನ ಕಿಟಕಿ ಸರಳುಗಳನ್ನು ಮುರಿದು ಲಾಕರ್‌ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಶನಿವಾರ ಹಾಗೂ ಭಾನುವಾರ ಎರಡು ದಿನ ಬ್ಯಾಂಕ್ ರಜೆ ಇದ್ದ ಕಾರಣ ಶುಕ್ರವಾರ ರಾತ್ರಿ ಕಳ್ಳರು ಈ ಕೃತ್ಯ ಎಸಗಿರುವ ಬಗ್ಗೆ ನ್ಯಾಮತಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕಳ್ಳರು ಗುರುತು ಪತ್ತೆಯಾಗದಂತೆ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಸಮೇತ ಪರಾರಿಯಾಗಿದ್ದರು. ಅಲ್ಲದೇ ಶ್ವಾನದಳದ ಶ್ವಾನಗಳಿಗೆ ವಾಸನೆ ಗ್ರಹಿಸಲು ಸಾಧ್ಯವಾಗದಂತೆ ಬ್ಯಾಂಕ್‌ನ ಒಳಗಡೆ ಖಾರದ ಪುಡಿ ಎರಚಿದ್ದಾರೆ. ಕಳ್ಳರನ್ನು ಹಿಡಿಯಲು ಎಎಸ್ಪಿ ಸ್ಯಾಮ್ ವರ್ಗೀಸ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ..

- Advertisement -

Related news

error: Content is protected !!