Wednesday, August 5, 2026
spot_imgspot_img
spot_imgspot_img

ನಕಲಿ ಚಿನ್ನ ಹಗರಣ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧಿಸಿದ ED

- Advertisement -
- Advertisement -

ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಬ್ಯಾಂಕ್‍ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಬಂಧಿಸಿದ್ದಾರೆ.

ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು. ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ ವಿಚಾರಣೆ ನಡೆಸಿದ್ದರು.ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಗೌಡ ಅವರನ್ನು ಇಂದು ಅಧಿಕೃತವಾಗಿ ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ 1ನೇ ಸಿಸಿಹೆಚ್​ ನ್ಯಾಯಾಲಯ​, ಆರೋಪಿಯನ್ನು 14 ದಿನ ಇಡಿ ಕಸ್ಟಡಿಗೆ ನೀಡಿದೆ.

- Advertisement -

Related news

error: Content is protected !!