- Advertisement -
- Advertisement -


ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನ ರೈತರ ಮಕ್ಕಳಿಗೆ ಒಂದು ಮಹತ್ವದ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಇದೀಗ ರಾಜ್ಯ ಸರ್ಕಾರ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಬಗ್ಗೆ ಅಧಿಕೃತ ಆದೇಶ ಹೊರಿಡಿಸಿದೆ.
ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ಅವರು ರೈತರ ಮಕ್ಕಳಿಗೆ ಶಿಷ್ಯ ವೇತನ ಯೋಜನೆಯ ನಡವಳಿಗಳನ್ನು ಹೊರಡಿಸಿದ್ದು, ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಶಿಷ್ಯ ವೇತನ ನಿಗದಿಪಡಿಲಾಗಿದೆ. ಅದು ಈ ಕೆಳಗಿನಂತಿದೆ.


ಯಾರಿಗೆ ಎಷ್ಟು ವೇತನ?
- ಪಿಯುಸಿ, ಡಿಪ್ಲೊಮಾ, ಐಟಿಐ ವಿದ್ಯಾರ್ಥಿಗಳಿಗೆ 2,500 ರೂ., ವಿದ್ಯಾರ್ಥಿನಿಯರಿಗೆ 3,000 ರೂ. ನೀಡಲಾಗುವುದು
- ಪದವಿಯ ಬಿಎ, ಬಿಎಸ್ಸಿ, ಬಿಕಾಂ ವಿದ್ಯಾರ್ಥಿಗಳಿಗೆ 5000 ರೂಪಾಯಿ ಮತ್ತು ವಿದ್ಯಾರ್ಥಿನಿಯರಿಗೆ 5500 ರೂ. ನೀಡಲಾಗುವುದು.
- ಎಲ್.ಎಲ್.ಬಿ., ಪ್ಯಾರಾಮೆಡಿಕಲ್, ಬಿ ಫಾರ್ಮಾ, ನರ್ಸಿಂಗ್ ವಿದ್ಯಾರ್ಥಿಗಳಿಗೆ 7,500 ರೂಪಾಯಿ, ವಿದ್ಯಾರ್ಥಿನಿಯರಿಗೆ 8000 ರೂ. ನೀಡಲಾಗುವುದು.
- ಎಂಬಿಬಿಎಸ್, ಬಿಇ, ಬಿಟೆಕ್, ಪಿಜಿ ವಿದ್ಯಾರ್ಥಿಗಳಿಗೆ 10,000 ರೂ., ವಿದ್ಯಾರ್ಥಿನಿಯರಿಗೆ 11,000 ರೂಪಾಯಿ ನೀಡಲಾಗುತ್ತದೆ. ಕೃಷಿ ಜಮೀನು ಹೊಂದಿರುವ ರೈತರ ಮಕ್ಕಳಿಗೆ ಶಿಷ್ಯವೇತನ ನೀಡಲಾಗುವುದು ಎಂದು ಹೇಳಲಾಗಿದೆ.
ಷರತ್ತುಗಳು
- ರೈತರ ಮಕ್ಕಳು ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತ ಒಂದು ಶಿಷ್ಯವೇತನಕ್ಕೆ ಮಾತ್ರ ಅರ್ಹರಾಗುತ್ತಾರೆ. ಆದರೆ ಮೆರಿಟ್, ಅರ್ಹತಾ ಪರೀಕ್ಷೆ, ಶೈಕ್ಷಣಿಕ ಪರೀಕ್ಷೆಗಳಲ್ಲಿ ಖಚಿಟಿಞ ಇತ್ಯಾದಿಗಳ ಆಧಾರದ ಮೇಲೆ ಪಡೆಯುವ ಶಿಷ್ಯವೇತನ, ಪ್ರಶಸ್ತಿ, ಪ್ರತಿಫಲ, ಇವುಗಳನ್ನು ರೈತರ ಮಕ್ಕಳು ಪಡೆದಿದ್ದರೂ, ಈ ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.
- ರೈತರ ಮಕ್ಕಳ ತಂದೆ-ತಾಯಿ ಇಬ್ಬರು ಕೃಷಿ ಜಮೀನಿನ ಒಡೆಯರಾಗಿದ್ದರೇ, ಈ ಯೋಜನೆಯಲ್ಲಿ ಒಂದು ಶಿಷ್ಯವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.
- ಈ ಶಿಷ್ಯವೇತನವು ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಷ್ಟರ್, ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿರತ್ಕದ್ದು.
- ಕೋರ್ಸ್ ನ ಸೆಮಿಸ್ಟರ್ ನಲ್ಲಿ, ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿ, ಪುನಹ ಆ ಸೆಮಿಸ್ಟರ್, ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸದ ಪುನರಾವರ್ತನೆಯಾದರೇ, (ಮರು ಪರೀಕ್ಷೆ ತೆಗೆದುಕೊಂಡರು) ವಿದ್ಯಾರ್ಥಿಗಳು ಶಿಕ್ಷವೇತನವನ್ನು ಪಡೆಯಲು ಅರ್ಹರಾಗಿರುವುದಿಲ್ಲ.
- ಈ ಶಿಷ್ಯವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್ ಗೆ ನೀಡಲಾಗುವುದು.


- Advertisement -








