ಕಾನೂನು ಸೇವಾ ಪ್ರಾಧಿಕಾರ ಮಂಗಳೂರು ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಸಹಯೋಗದಲ್ಲಿ ಗಿಡ ನೆಡುವಿಕೆ



ಮಾಣಿ: ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಇದರ ಸಹಯೋಗದೊಂದಿಗೆ ಜುಲೈ14ರಂದು ಮಾಣಿ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ, ಶಿಕ್ಷಣ ಇಲಾಖೆಯ ಪ್ರತಿನಿಧಿ, ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರಿನ ಪ್ರತಿನಿಧಿ ಪ್ರೇಮಿ ಫರ್ನಾಂಡಿಸ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಅಧ್ಯಕ್ಷೆ ಸುಮಂಗಲಾ ಶೆಣೈ, ಕೋಶಾಧಿಕಾರಿ ರೋಹಿಣಿ ರಾಘವ ಆಚಾರ್ಯ ಮತ್ತು ಸದಸ್ಯೆ ರತ್ನಾ ನಾಯರ್ ಅವರು ಉಪಸ್ಥಿತರಿದ್ದರು.

ಅತಿಥಿಗಳು ವಿದ್ಯಾರ್ಥಿಗಳೊಂದಿಗೆ ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟು, ಗಿಡವನ್ನು ಯಾವ ರೀತಿ ಪೋಷಣೆ ಮಾಡಬೇಕು ಎಂಬುದರ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ, ಶಿಕ್ಷಕ ವರ್ಗ ಹಾಗೂ ಮಕ್ಕಳ ಪೋಷಕರು ಭಾಗವಹಿಸಿದ್ದರು.








