Friday, June 5, 2026
spot_imgspot_img
spot_imgspot_img

ಇಡ್ಕಿದು: ಮಿತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶಾಲಾ ಪ್ರಾರಂಭೋತ್ಸವ”

- Advertisement -
- Advertisement -

ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ .ಶಾಲಾ ಪ್ರಾರಂಭೋತ್ಸವವನ್ನು ಬಹಳ ವಿಜೃಂಭಣೆಯಿಂದ ನೆರವೇರಿಸಸಲಾಯಿತು.

ಶಾಲೆಗೆ ಹೊಸದಾಗಿ ದಾಖಲಾದ ಮಕ್ಕಳನ್ನು ಬ್ಯಾಂಡ್ ವಾದ್ಯಗಳೊಂದಿಗೆ ಅದ್ದೂರಿ ಮೆರವಣಿಗೆಯೊಂದಿಗೆ ಶಾಲೆಗೆ ಬರಮಾಡಿಕೊಳ್ಳಲಾಯಿತು. ಬಳಿಕ ನಡೆದ ಸಮಾರಂಭದಲ್ಲಿ ಮಕ್ಕಳಿಗೆ ಹೂ ಪೆನ್ನು ಪುಸ್ತಕ ನೀಡಿ ಅಭಿನಂದಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸುಧೀರ್ ಕುಮಾರ್ ಶೆಟ್ಟಿ ಯವರು ವಹಿಸಿದ್ದರು. ಶ್ರೀಯುತರು ಶಾಲೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಬೆಳಕು ಚೆಲ್ಲಿ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಈ ವರ್ಷದ ಧ್ಯೇಯ ವಾಕ್ಯದಂತೆ ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ ಎಂಬಂತ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುತ್ತಿದ್ದು ಇದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.ಮುಖ್ಯ ಅತಿಥಿಗಳಾದ ಶ್ರೀ ಸುಧಾಕರ ಶೆಟ್ಟಿ ಬೀಡಿನಮಜಲು ಅಧ್ಯಕ್ಷರು ಇಡ್ಕಿದು ಸೇವಾ ಸಹಕಾರಿ ಸಂಘ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶಾಲೆಯಲ್ಲಿ ಉತ್ತಮ ವ್ಯವಸ್ಥೆ ಇದ್ದು ಕಲಿಕೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗುತ್ತಿರುವುದು ಊರಿಗೆ ಹೆಮ್ಮೆ ಎಂದು ತಿಳಿಸಿದರು .ವಿಶೇಷ ಅತಿಥಿಯಾಗಿ ಆಗಮಿಸಿದ ನಾಸಿರ್ ಕೋಲ್ಪೆಯವರು ಶಾಲೆಯು ಪ್ರಗತಿಪಥದಲ್ಲಿ ಸಾಗುತ್ತಿದ್ದು ,ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಲು ಶಾಲೆಯ ಬೇಡಿಕೆಗಳಿಗೆ ಆದ್ಯತೆ ಮೇರೆಗೆ ಎಲ್ಲ ಸವಲತ್ತುಗಳನ್ನು ದೊರಕಿಸಿಕೊಡಲು ಶ್ರಮಿಸುವುದಾಗಿ ಭರವಸೆ ನೀಡಿದರು. ಆದ೦ MMS ದಯಾನಂದ ಕುವೆತ್ತಿಲ, ಅನಿಲ್ ಕುಮಾರ್ ಅಳಕೆಮಜಲು ಮತ್ತು ಬಾಲಕೃಷ್ಣ ಶೆಟ್ಟಿ ನೇರಳಕಟ್ಟೆ ಇವರುಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರಾದ ಶ್ರೀ ರಮೇಶ್ ಪೂಜಾರಿ ಸೂರ್ಯ .ಗುತ್ತಿಗೆದಾರರಾದ ಮಾರ್ಷಲ್ ಪಾಯಸ್, ಹಿರಿಯ ವಿದ್ಯಾರ್ಥಿ ಸಾದಿಕ್ ಅಕ್ಕರೆ, SDMC ಸದಸ್ಯರುಗಳಾದ ಶಶಿಪ್ರಭಾ, ದಾಮೋದರ, ಸುಮತಿ , ಸೌಮ್ಯ ಯಶೋಧರವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಶ್ರೀಮತಿ ಸರೋಜಾ ಎ ಇವರು ಸ್ವಾಗತಿಸಿ ,ಜೂಲಿಯಾನ ಮೇವಿಸ್ ರವರು ವಂದಿಸಿದರು.

- Advertisement -

Related news

error: Content is protected !!