- Advertisement -
- Advertisement -



ಜೈಪುರ: ರಾಜಸ್ಥಾನದ ಝಾಲಾವರ್ ಜಿಲ್ಲೆಯಲ್ಲಿ ಸರಕಾರಿ ಶಾಲಾ ಕಟ್ಟಡ ಕುಸಿದು ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವು ಮಕ್ಕಳು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಝಾಲಾವರ್ ಜಿಲ್ಲೆಯ ಮನೋಹರ್ ಥಾನಾದ ಪಿಪ್ಲೋಡಿ ಸರಕಾರಿ ಶಾಲೆಯಲ್ಲಿ ಶುಕ್ರವಾರ ಬೆಳಿಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದೆ. ಶಾಲಾ ಕಟ್ಟಡ ಕುಸಿತದ ವೇಳೆ ಶಿಕ್ಷಕರು, ಸಿಬ್ಬಂದಿಗಳು ಮತ್ತು ಸರಿಸುಮಾರು 40 ಮಕ್ಕಳು ಶಾಲಾ ಆವರಣದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವಶೇಷಗಳಡಿ ಸಿಲುಕಿದ ವಿದ್ಯಾರ್ಥಿಗಳನ್ನು ರಕ್ಷಿಸಲು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿತ್ತು ಮತ್ತು ಈ ಬಗ್ಗೆ ಈ ಹಿಂದೆ ಹಲವಾರು ಬಾರಿ ದೂರುಗಳು ನೀಡಲಾಗಿತ್ತು ಎಂದು ಮೂಲಗಳು ತಿಳಿಸಿದೆ.
- Advertisement -








