Saturday, June 6, 2026
spot_imgspot_img
spot_imgspot_img

ಶಾಲಾ ಬಸ್‌ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ : ಇಬ್ಬರು ವಿದ್ಯಾರ್ಥಿಗಳು ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ವು ಜನರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ.

ಸಮರ್ಥ (7) ಹಾಗೂ ಶ್ರೀಕಾಂತ (12) ಮೃತ ವಿದ್ಯಾರ್ಥಿಗಳು. ಅಪಘಾತ ಸಂಭವಿಸಿದ ಕೂಡಲೇ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡ 40ಕ್ಕೂ ಹೆಚ್ವು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ

40 ಜನ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಶಾಲಾ ಬಸ್ಸಿನಲ್ಲಿದ್ದ 17 ಜನರಿಗೆ ಗಂಭೀರ ಗಾಯಗಳಾಗಿದ್ದು, ನಾಲ್ಕು ವಿದ್ಯಾರ್ಥಿಗಳ ಕಾಲುಗಳು ತುಂಡಾಗಿವೆ.ಮೂವರ ಸ್ಥಿತಿ ಗಂಭೀರವಾಗಿದ್ದು, 23 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಸರ್ಕಾರಿ ಬಸ್ಸಿನಲ್ಲಿದ್ದ 17 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!