Saturday, June 13, 2026
spot_imgspot_img
spot_imgspot_img

ಕಾಸರಗೋಡು: ಶಾಲಾ ಬಸ್- ರಿಕ್ಷಾ ನಡುವೆ ಭೀಕರ ಅಪಘಾತ – 5 ಮಂದಿ ದಾರುಣ ಮೃತ್ಯು

- Advertisement -
- Advertisement -

ಕಾಸರಗೋಡು: ಆಟೋ ರಿಕ್ಷಾ ಹಾಗೂ ಶಾಲಾ ಬಸ್ ಪರಸ್ಪರ ಡಿಕ್ಕಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.

ಪೆರ್ಲ ಭಾಗದಿಂದ ಚಲಿಸುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಪುತ್ತೂರು ಮೂಲದ ರಿಕ್ಷಾ ಅಪಘಾತಕ್ಕಿಡಾಗಿರುವುದಾಗಿ ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ. ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಡ್ರೈವರ್ ಸಹಿತ ಓರ್ವ ಪುರುಷ ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಪೆರ್ಲ ಭಾಗದಲ್ಲಿ ಇಳಿಸಿದ ಶಾಲಾ ಬಸ್‌ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ.

ಮೃತರ ಪರಿಚಯ ಸ್ಥಳದಲ್ಲಿ ಇದ್ದವರಿಗೆ ಮಾಹಿತಿ ಲಭಿಸಿಲ್ಲವಾದ್ದರಿಂದ ಗುರುತು ಪತ್ತೆ ಹಚ್ಚಲು ಗಂಟೆಗಳಷ್ಟು ಕಾಲ ಪರದಾಡಬೇಕಾಯಿತು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.

- Advertisement -

Related news

error: Content is protected !!