Wednesday, July 22, 2026
spot_imgspot_img
spot_imgspot_img

ಬೆಂಗಳೂರು: ಬೈಕ್‌ಗೆ ಶಾಲಾ ಬಸ್ ಡಿಕ್ಕಿ; ಬಸ್​ ಹರಿದು ಮಕ್ಕಳಿಬ್ಬರು ಮೃತ್ಯು

- Advertisement -
- Advertisement -

ಬೆಂಗಳೂರು : ಬೈಕ್‌ಗೆ ಶಾಲಾ ಬಸ್‌ವೊಂದು ಡಿಕ್ಕಿ ಹೊಡೆದಿದ್ದರಿಂದ ಬೈಕ್‌ನಿಂದ ಕೆಳಗೆ ಬಿದ್ದ ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಬೆಂಗಳೂರಿನ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್​​ ಬಳಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ವರ್ಷಾ(2) ಹಾಗೂ ಭಾನು(4) ಎಂದು ಗುರುತಿಸಲಾಗಿದೆ.

ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿ ಪೊಲೀಸ್ ಸಿಬ್ಬಂದಿ ನಾಗನಗೌಡ ತನ್ನ ಮಗಳು ವರ್ಷಾ ಹಾಗೂ ಅಣ್ಣನ ಮಗಳು ಭಾನು ಅನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಖಾಸಗಿ ಶಾಲೆಗೆ ಸೇರಿದ ಬಸ್ ಅಜಾಗರೂಕತೆಯಿಂದ ಬೈಕ್‌ಗೆ ಢಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿತ್ತು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲಾ ಬಸ್ ಚಾಲಕನನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!