ಓರ್ವ ವಿದ್ಯಾರ್ಥಿನಿ ಮೃತ್ಯು…! ಹಲವು ವಿದ್ಯಾರ್ಥಿಗಳಿಗೆ ಗಾಯ
ಬಂಟ್ವಾಳ: ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಶಾಲಾ ಬಸ್‌ವೊಂದರ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬದ್ದು ಓರ್ವ ವಿದ್ಯಾರ್ಥಿನಿ ಮೃತ ಪಟ್ಟು, ಉಳಿದ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ನಡೆದಿದೆ.
ದುರ್ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವ ವಿದ್ಯಾರ್ಥಿ ಮೃತ ಪಟ್ಟಿದ್ದಾರೆ. ಮೃತ ವಿದ್ಯಾರ್ಥಿಯನ್ನು ಮಾಣಿ ಕಲ್ಲೆಟ್ಟಿ ನಿವಾಸಿ, ಯುಕೆಜಿ ವಿದ್ಯಾರ್ಥಿನಿ ಚಿರಸ್ವಿ ಎಂದು ಗುರುತಿಸಲಾಗಿದೆ.
ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್‌ನೊಳಗಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದರು. ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಮಳೆ ಮತ್ತು ಬಿರುಗಾಳಿಯ ಪರಿಣಾಮ ಮರ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








