Tuesday, April 23, 2024
spot_imgspot_img
spot_imgspot_img

ಶಾಲಾ, ಕಾಲೇಜು ದಾಖಲಾತಿ ಅವಧಿ ಫೆ.20ರ ವರೆಗೆ ವಿಸ್ತರಣೆ

- Advertisement -G L Acharya panikkar
- Advertisement -

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ, ಕಾಲೇಜುಗಳ ದಾಖಲಾತಿ ಅವಧಿಯನ್ನು ಫೆ.20 ರವರೆಗೆ ವಿಸ್ತರಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಈ ವರ್ಷ ಶಾಲಾ, ಕಾಲೇಜುಗಳು ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ತರಗತಿಗಳ ದಾಖಲಾತಿಯನ್ನು ಫೆಬ್ರವರಿ 20ರ ವರೆಗೆ ವಿಸ್ತರಿಸಲಾಗಿದೆ. ಈ ವರ್ಷದ ದಾಖಲಾತಿಗೆ ಫೆಬ್ರವರಿ 6 ಕಡೆಯ ದಿನವಾಗಿತ್ತು. ಹಲವಾರು ವಿದ್ಯಾರ್ಥಿಗಳು ಇನ್ನೂ ತರಗತಿಗಳಿಗೆ ದಾಖಲಾಗಲು ಸಾಧ್ಯವಾಗಿಲ್ಲ. ವಿದ್ಯಾರ್ಥಿಗಳ ಮನವಿ ಮೇರೆಗೆ ದಾಖಲಾತಿಯನ್ನು ಫೆ.20ರವರೆಗೆ ವಿಸ್ತರಿಸಬೇಕೆಂದು ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಈ ವರ್ಷ ತರಗತಿಗಳು ವಿಳಂಬವಾಗಿ ಆರಂಭವಾಗಿರುವ ಹಿನ್ನೆಲೆ ದಾಖಲಾತಿಯ ಸಮಯ ವಿಸ್ತರಣೆ ಮಾಡುವಂತೆ ವಿದ್ಯಾರ್ಥಿಗಳು ಕೋರಿದ್ದರು. ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಸಚಿವ ಸುರೇಶ್ ಕುಮಾರ್ ದಾಖಲಾತಿಗೆ ಅವಧಿ ವಿಸ್ತರಿಸಲು ಸೂಚಿಸಿದ್ದಾರೆ.

- Advertisement -

Related news

error: Content is protected !!