Saturday, June 28, 2025
spot_imgspot_img
spot_imgspot_img

ಶಾಲಾ-ಕಾಲೇಜುಗಳನ್ನು ಆರಂಭ ಮಾಡುವ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾಹಿತಿಯನ್ನು ಸರಕಾರ ನೀಡಲಿದೆ – ಡಾ.ಸಿ.ಎನ್.ಅಶ್ವತ್ಥನಾರಾಯಣ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭ ಮಾಡುವ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾಹಿತಿಯನ್ನು ಸರಕಾರ ನೀಡಲಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.


ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿ ಯುಜಿಸಿ ಈಗಾಗಲೆ ಮಾರ್ಗಸೂಚಿಯನ್ನು ನೀಡಿದೆ. ಅದರಂತೆ ಸರಕಾರ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಜತೆಗೂ ಚರ್ಚೆ ನಡೆಸಿದ ನಂತರ ಸ್ಪಷ್ಟ ಮಾಹಿತಿ ನೀಡಲಾಗುವುದು ಎಂದರು.


ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೆ ಸಮಸ್ಯೆ ಆಗದಂತೆ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಂಡು, ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಅದರ ಮುಂದುವರಿದ ಭಾಗವಾಗಿ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಎಂದಿನಿಂದ ಹಾಜರಾಗಬೇಕು ಎಂಬ ಬಗ್ಗೆ ಸಂಬಂಧಿತರ ಜತೆ ಚರ್ಚೆ ಮಾಡಲಾಗುವುದು ಎಂದು ಅಶ್ವತ್ಥ ನಾರಾಯಣ ಹೇಳಿದರು.


ಕೋವಿಡ್ ಮಾರ್ಗಸೂಚಿಯ ಪ್ರಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಅವೆಲ್ಲವುಗಳ ಸಾಧಕ-ಬಾಧಕಗಳನ್ನು ನೋಡಿಕೊಂಡೇ ತರಗತಿಗಳನ್ನು ಆರಂಭ ಮಾಡಲಾಗುವುದು ಎಂದು ಅವರು ತಿಳಿಸಿದರು.

- Advertisement -

Related news

error: Content is protected !!