Monday, June 22, 2026
spot_imgspot_img
spot_imgspot_img

ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ- ಸುರೇಶ್ ಕುಮಾರ್

- Advertisement -
- Advertisement -

ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ.ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ.

ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ.ನಾನೀಗ ಸಧ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ.

ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

- Advertisement -

Related news

error: Content is protected !!