Sunday, June 21, 2026
spot_imgspot_img
spot_imgspot_img

ಕಡಬ: ಕಾಮಗಾರಿ ವೇಳೆ ಶಾಲಾ ಕೊಠಡಿಯ ಗೋಡೆ, ಮೇಲ್ಚಾವಣಿ ಕುಸಿತ : ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

- Advertisement -
- Advertisement -

ಕಡಬ : ಕಾಮಗಾರಿ ವೇಳೆ ಶಾಲಾ ಕೊಠಡಿಯ ಗೋಡೆ, ಮೇಲ್ಚಾವಣಿ ಕುಸಿತಗೊಂಡ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕಡಬ ತಾಲೂಕಿನ ಕುಂತೂರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿಆ.27ರಂದು ಮಧ್ಯಾಹ್ನದ ವೇಳೆಗೆ ನಡೆದಿದೆ.

ದುರಸ್ತಿಯಲ್ಲಿದ್ದ ಶಾಲಾ ಕಟ್ಟಡದ ಪಕ್ಕದಲ್ಲೇ ಹಳೆಯ ಕಟ್ಟಡದ ಬಳಿ ಜೆಸಿಬಿ ಮೂಲಕ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಹಳೆಯ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಇದರಿಂದಾಗಿ ನಾಲ್ಕು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಈ ವೇಳೆ ಹೆಚ್ಚಿನ ಮಕ್ಕಳು ಆಟದ ಮೈದಾನಕ್ಕೆ ತೆರಳಿರುವುದರಿಂದ ದೊಡ್ಡ ಅನಾಹುತ ನಡೆದಿಲ್ಲ ಎಂದು ತಿಳಿದುಬಂದಿದೆ

- Advertisement -

Related news

error: Content is protected !!