Friday, June 5, 2026
spot_imgspot_img
spot_imgspot_img

ಉಡುಪಿ: ಶಾಲಾ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳ ದಾಳಿ : ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

- Advertisement -
- Advertisement -

ಉಡುಪಿ: ಶಾಲೆಗೆ ಹೋಗುತ್ತಿದ್ದ÷ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಮಗು ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಉಡುಪಿಯ ಹೂಡೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ನಾಯಿಗಳು ದಾಳಿ ಮಾಡಿವೆ. ಕೈಯಲ್ಲಿ ಕೊಡೆ ಹಿಡಿದು ನಿಂತಿದ್ದ ವಿದ್ಯಾರ್ಥಿನಿಯತ್ತ ಬೀದಿ ನಾಯಿಗಳು ಒಮ್ಮೇಲೆ ನುಗ್ಗಿ ಬಂದಿವೆ. ನಾಲೈದು ನಾಯಿಗಳು ಒಮ್ಮೆಲೇ ಅಟ್ಯಾಕ್ ಮಾಡಿದ್ದರಿಂದ ವಿದ್ಯಾರ್ಥಿನಿ ಬೊಬ್ಬೆ ಹಾಕಿದ್ದಾಳೆ. ಬಳಿಕ ಕೈಯಲ್ಲಿದ್ದ ಕೊಡೆಯನ್ನು ಬೀಸಿ, ನಾಯಿಗಳಿಂದ ರಕ್ಷಿಸಿಕೊಂಡು ಬಚಾವಾಗಿದ್ದಾಳೆ. ವಿದ್ಯಾರ್ಥಿನಿಯ ಮೇಲೆ ನಡೆದ ನಾಯಿ ದಾಳಿಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹೂಡೆ ಪರಿಸರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳ ಕಾಟದಿಂದ ಸ್ಥಳೀಯರು ಬೇಸತ್ತು ಹೋಗಿದ್ದಾರೆ. ಬೀದಿ ನಾಯಿಗಳ ಕಾಟದಿಂದ ಮುಕ್ತಿ ನೀಡುವಂತೆ ಹಲವು ದಿನಗಳಿಂದ ಮನವಿ ಮಾಡುತ್ತಿದ್ದಾರೆ.

- Advertisement -

Related news

error: Content is protected !!