Saturday, October 12, 2024
spot_imgspot_img
spot_imgspot_img

ಸದ್ಯಕ್ಕೆ ಶಾಲಾ-ಕಾಲೇಜು ಓಪನ್ ಆಗಲ್ಲ : ಸುರೇಶ್ ಕುಮಾರ್.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿಯಿಂದಾಗಿ  ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​.ಸುರೇಶ್​ ಕುಮಾರ್​ ಸ್ಪಷ್ಟಪಡಿಸಿದರು.ಮಕ್ಕಳ ಭವಿಷ್ಯದ ದೃಷ್ಟಿಯಿಂದ ಆಗಸ್ಟ್ ಇಲ್ಲವೇ ಸೆಪ್ಟೆಂಬರ್ ನಲ್ಲಿ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಹೇಳಲಾಗಿತ್ತು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ.ಆದ್ರೆ ಮಕ್ಕಳನ್ನು ಶಾಲೆಗೆ ಕಳಿಸದೇ ಶಿಕ್ಷಣ ನೀಡಲಾಗುವುದು. ಆಕಾಶವಾಣಿ, ಚಂದನ ದೂರದರ್ಶನ, ಶಿಕ್ಷಣ ಇಲಾಖೆಯ ಚಾನೆಲ್​ ಸೇರಿ ಲಭ್ಯ ಆಗಬಹುದಾದ ಎಲ್ಲ ಅವಕಾಶಗಳನ್ನೂ ಮುಕ್ತವಾಗಿರಿಸಿಕೊಂಡು ಮಕ್ಕಳ ಹಿತದೃಷ್ಟಿಯಿಂದ ಯಾವ ಮಾದರಿ ಉತ್ತಮ ಎಂದು ಆಲೋಚಿಸುತ್ತಿದೆ ಎಂದು ಸಚಿವರು ತಿಳಿಸಿದರು.

- Advertisement -

Related news

error: Content is protected !!