Friday, April 26, 2024
spot_imgspot_img
spot_imgspot_img

ಡಿ.15 ರ ಬಳಿಕ ಶಾಲೆ ಆರಂಭಕ್ಕೆ ಆರ್ ಟಿಇ ಪಾಲಕರ ಸಂಘ ಸಲಹೆ

- Advertisement -G L Acharya panikkar
- Advertisement -

ಬೆಂಗಳೂರು(ನ.12): ಡಿಸೆಂಬರ್‌ 15ರ 9ರಿಂದ 12ನೇ ತರಗತಿ ಆರಂಭಿಸಬಹುದು ಎಂದು ಆರ್‌ಟಿಇ ಪಾಲಕರ ಸಂಘ ಮತ್ತು ಖಾಸಗಿ ಶಾಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸಲಹೆ ನೀಡಿದ್ದಾರೆ.

ಆರ್‌ಟಿಇ ಪಾಲಕರು ಹಾಗೂ ಖಾಸಗಿ ಶಾಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಅಭಿಪ್ರಾಯ ಪಡೆದಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಆರ್‌ಟಿಇ ಪಾಲಕರ ಸಂಘ ಮತ್ತು ಖಾಸಗಿ ಶಾಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ.


ಡಿಸೆಂಬರ್‌ 15ರ ಬಳಿಕ 9ರಿಂದ 12ನೇ ತರಗತಿಯನ್ನು ಆರಂಭಿಸಬಹುದು. ಶಾಲೆಯಲ್ಲಿ ನಿತ್ಯ ಪ್ರಾರ್ಥನೆ ಸಹಿತ ಪಠ್ಯೇತರ ಚಟುವಟಿಕೆ ನಡೆಸಬಾರದು ಮಕ್ಕಳು ಗುಂಪು ಸೇರದಂತೆ ಎಚ್ಚರಿಕೆ ವಹಿಸಬೇಕು. ಪ್ರತಿ ವಿದ್ಯಾರ್ಥಿಗೂ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕು ಎಂಬ ಆಗ್ರಹವನ್ನು ಇಲಾಖೆ ಮುಂದಿಟ್ಟಿದ್ದೇವೆ ಎಂದು ಆರ್‌ಟಿಇ ಪಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್‌.ಯೋಗಾನಂದ ಮಾಹಿತಿ ನೀಡಿದ್ದಾರೆ.

ಶಾಲಾರಂಭಕ್ಕೆ ಸಂಬಂಧಿಸಿ ಈಗಾಗಲೇ ಸರ್ಕಾರಕ್ಕೆ ಒಂದು ವರದಿ ಸಲ್ಲಿಸಿದ್ದೇವೆ. ಸಭೆಯಲ್ಲಿ ವ್ಯಕ್ತವಾಗಿರುವ ಎಲ್ಲ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಹೆಚ್ಚುವರಿ ಅಂಶಗಳನ್ನು ಸರ್ಕಾರದ ಮುಂದಿಡಲಿದ್ದೇವೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

Related news

error: Content is protected !!