Tuesday, September 1, 2026
spot_imgspot_img
spot_imgspot_img

ದ.ಕ ಸೇರಿ ಮೂರು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಇಂದಿನಿಂದ ಶಾಲೆ ಪ್ರಾರಂಭ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಇಂದಿನಿಂದ ಶಾಲೆ ಆರಂಭವಾಗಲಿದೆ ಎಂದು ರಾಜ್ಯ ಸರಕಾರ ತಿಳಿಸಿದೆ.

ಕೊರೋನಾ ಪಾಸಿಟಿವಿಟಿ ದರ ಶೇ.2 ಕ್ಕಿಂತ ಹೆಚ್ಚಿರುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಶಾಲೆಯನ್ನು ಆರಂಭಿಸುವುದಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆಯು ಈ ಹಿಂದೆ ತಿಳಿಸಿತ್ತು. ಇದೀಗ ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಕಾರಣ ಇಂದಿನಿಂದ ತರಗತಿಯನ್ನು ಪ್ರಾರಂಭಿಸಲಾಗುತ್ತಿದೆ. ಕೊರೋನಾ ವಾರ್‌ ರೂಂ ಬುಲೆಟಿನ್‌ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳು ಮಾತ್ರ ಶೇ. 2 ಕ್ಕಿಂತ ಅಧಿಕ ಪಾಸಿಟಿವಿಟಿ ದರ ಹೊಂದಿವೆ. ಒಟ್ಟಾರೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.8 ಇದೆ. ಮರಣ ದರ ಶೇ. 1.3 ಇದೆ.

- Advertisement -

Related news

error: Content is protected !!