Friday, March 29, 2024
spot_imgspot_img
spot_imgspot_img

ನಾಳೆಯಿಂದ(ಮೇ.31) ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭ

- Advertisement -G L Acharya panikkar
- Advertisement -

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭಗೊಳ್ಳಲಿವೆ ಎಂದು 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ನೀಡಿದೆ.

2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆರಂಭಿಸುತ್ತಿದ್ದಂತೆ, ಮೇ. 29 ಮತ್ತು 30 ರಂದು ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಪ್ರಾರಂಭೋತ್ಸವಕ್ಕೆ ಸಿದ್ಧತೆಗಳನ್ನು ಮಾಡಲಾಗಿದೆ. ಶಾಲಾ ಶಿಕ್ಷಣ ಇಲಾಖೆಯು ಮೇ 31ರಂದು ಶಾಲಾ ಪ್ರಾರಂಭೋತ್ಸವಕ್ಕೆ ದಿನಾಂಕವನ್ನು ನಿಗದಿ ಪಡಿಸಿದೆ.

ಶಾಲೆ ಆರಂಭದ ದಿನ ಯಾವುದೇ ಪಠ್ಯ ಚಟುವಟಿಕೆಗಳನ್ನು ಆರಂಭಿಸದೆ ನೋ ಬ್ಯಾಗ್ ಡೇ ಆಗಿ ಆಚರಿಸಲು ತಿಳಿಸಲಾಗಿದೆ. ಮಕ್ಕಳಿಗೆ ಸೈರ್ಯ ತುಂಬುವ ನಿಟ್ಟಿನಲ್ಲಿ ಮೊದಲ ದಿನ ವಿವಿಧ ಚಟುವಟಿಕೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಸೂಚನೆ ನೀಡಲಾಗಿದೆ.

ತಾಲೂಕಿನ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಶಿಕ್ಷಣ ಇಲಾಖೆಯ ಮೂಲಕ ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ ಇನ್ನೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ತರಗತಿವಾರು ಮತ್ತು ವಿಷಯವಾರು ಪಠ್ಯಪುಸ್ತಕಗಳ ವಿತರಣೆ ಮಾಡಲಾಗುತ್ತದೆ. ಅನುದಾನಿತ ಹಾಗೂ ಸರಕಾರಿ ಶಾಲೆಗಳಿಗೆ ಉಚಿತ ಪ್ರತಿ ಪಠ್ಯ ಪುಸ್ತಕವನ್ನು ಪೂರೈಕೆ ಮಾಡಲಾಗುತ್ತದೆ. ಹೆಚ್ಚು ಅಥವಾ ಕಡಿಮೆಯಾದಲ್ಲಿ ಮರಳಿ ಬಿಇಒ ಕಚೇರಿಯನ್ನು ಸಂಪರ್ಕಿಸುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!