Thursday, May 2, 2024
spot_imgspot_img
spot_imgspot_img

ಶಾಲೆ-ಕಾಲೇಜು ಆರಂಭ ದಿನಾಂಕ ಪ್ರಕಟ: ಸಿಎಂ ಘೋಷಣೆ

- Advertisement -G L Acharya panikkar
- Advertisement -

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಇಷ್ಟು ತಿಂಗಳು ವಿರಾಮ ಆಗಿದ್ದ ಶಾಲೆ-ಕಾಲೇಜುಗಳು ಯಾವಾಗ ಆರಂಭವಾಗುತ್ತದೆ ಎಂಬ ಪ್ರಶ್ನೆ, ಕುತೂಹಲ ಇಷ್ಟು ದಿನಗಳ ಕಾಲ ಇತ್ತು. ಕೊನೆಗೂ ಅದಕ್ಕೆ ಬ್ರೇಕ್ ಬಿದ್ದಿದೆ.

2021ರ ಜನವರಿ 1ರಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗಲಿದ್ದು, 6ರಿಂದ 9ನೇ ತರಗತಿಯವರೆಗೆ ವಿದ್ಯಾಗಮ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಶಾಲೆ-ಕಾಲೇಜುಗಳ ಪ್ರಾರಂಭ ಕುರಿತು ಪರಿಸ್ಥಿತಿ ಅವಲೋಕಿಸಲು, ನಿರ್ಧಾರ ಕೈಗೊಳ್ಳಲು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅದರಲ್ಲಿ ಜನವರಿ 1ರಂದು 10 ಮತ್ತು ಪಿಯುಸಿ ತರಗತಿ ಪ್ರಾರಂಭಿಸಿ 15 ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿಗಳನ್ನು ಮುಂದಿನ ದಿನಗಳಲ್ಲಿ ಪ್ರಾರಂಭಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!