Friday, July 10, 2026
spot_imgspot_img
spot_imgspot_img

ಮಣಿಪಾಲ: ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದ ಶಾಲಾ ಬಸ್ – ಏಳು ಮಂದಿ ವಿದ್ಯಾರ್ಥಿಗಳಿಗೆ ಗಾಯ

- Advertisement -
- Advertisement -

ಮಣಿಪಾಲ: ಶಾಲಾ ಬಸ್ಸೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ಇಂದು ಬೆಳಗ್ಗೆ ನಡೆದಿದೆ.

ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಸ್ಕೂಲ್ ಬಸ್ ತಿರುವಿನಲ್ಲಿ ರಿವರ್ಸ್‌ ತೆಗೆಯುವಾಗ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿತ್ತೆನ್ನಲಾಗಿದೆ.

ಈ ಬಸ್ಸಿನಲ್ಲಿ ಸುಮಾರು 20 ಮಕ್ಕಳಿದ್ದು, ಇದರಲ್ಲಿ ಏಳು ಮಕ್ಕಳಿಗೆ ಗಾಯಗಳಾಗಿವೆ. ಈ ಪೈಕಿ ಓರ್ವ ಬಾಲಕಿ ತೀವ್ರ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಪಘಾತ ಸಂಭವಿಸಿದ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿದ್ದಾರೆ. ಘಟನೆ ಕುರಿತು ಮಣಿಪಾಲ್ ಪೊಲೀಸರು ‌ಪರಿಶೀಲನೆ ನಡೆಸಿದ್ದಾರೆ

- Advertisement -

Related news

error: Content is protected !!