Friday, May 17, 2024
spot_imgspot_img
spot_imgspot_img

ಬೆಳ್ತಂಗಡಿ: ಸ್ಕೂಟಿಗೆ ಪಿಕಪ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

- Advertisement -G L Acharya panikkar
- Advertisement -

ಬೆಳ್ತಂಗಡಿ : ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಹಳೇಕೋಟೆ ಬಳಿ ಸಂಭವಿಸಿದೆ.

ಪುರುಷೋತ್ತಮ (19) ಎಂಬಾತನೇ ಸಾವಿಗೀಡಾದ ಯುವಕ. ಇನ್ನೋರ್ವ ಯುವಕ ತೌಫೀಕ್‌ (17) ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ. ತೌಫೀಕ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ದ್ವಿಚಕ್ರ ವಾಹನ ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತ್ತಿದ್ದು, ಎದುರಿನಿಂದ ಬರುತ್ತಿದ್ದ ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದಿದ್ದು, ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!