- Advertisement -
- Advertisement -



ನೆಲ್ಯಾಡಿ: ಸ್ಕಾರ್ಪಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾ.ಹೆ.75ರ ಉದನೆಯಲ್ಲಿನಡೆದಿದೆ.
ಗಾಯಗೊಂಡವರನ್ನು ಶಿರಾಡಿ ಗ್ರಾಮದ ಕಳಪ್ಪಾರು ನಿವಾಸಿ ನಿತ್ಯಾನಂದ ಕೆ.(27ವ.) ಎಂದು ಗುರುತಿಸಲಾಗಿದೆ.
ಮಹಮ್ಮದ್ ಸಫ್ಘಾನ್ ಎಂಬವರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕಾರ್ಪಿಯೋ ಕಾರು ನಿತ್ಯಾನಂದ ಅವರು ನೆಲ್ಯಾಡಿಯಿಂದ ಉದನೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ನಿತ್ಯಾನಂದ ಅವರನ್ನು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಹೋಗಿ ಅಲ್ಲಿಂದ ಪುತ್ತೂರು ಪ್ರಗತಿ ಆಸ್ಪತ್ರೆಗೆ ಕರೆ ತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೈಕ್ ಸವಾರ ನಿತ್ಯಾನಂದ ಅವರ ದೂರಿನಂತೆ ಕಾರು ಚಾಲಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -