Friday, June 27, 2025
spot_imgspot_img
spot_imgspot_img

ವಿಧಾನಸೌಧದ ಗುಮ್ಮಟದಲ್ಲಿ ಬಿರುಕು; ಪರಿಶೀಲನೆ ನಡೆಸಿದ ಸ್ಪೀಕರ್ ಯುಟಿ ಖಾದರ್

- Advertisement -
- Advertisement -

ವಿಧಾನಸೌಧದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸ್ಪೀಕರ್ ಯು ಟಿ ಖಾದರ್ ಶನಿವಾರ ದಿಢೀರ್ ಪರಿಶೀಲನೆ ನಡೆಸಿದ್ದಾರೆ. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ಇರುವ ಗುಮ್ಮಟದಲ್ಲಿ ಬಿರುಕು ಮೂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ. ಈ ಕುರಿತು ಮಾತನಾಡಿದ ಅವರು, ‘ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಆದರೂ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ನಾನು ತರುತ್ತೇನೆ ಎಂದರು.

ನಮ್ಮ ವ್ಯಾಪ್ತಿಯಲ್ಲಿನ ಫ್ಲೋರ್‌ಗಳನ್ನು ಸರಿಪಡಿಸಿದ್ದೇನೆ. ಡಿಪಿಆರ್ ಹಾಗೂ ಲೋಕೋಪಯೋಗಿ ಇಲಾಖೆಯವರ ವ್ಯಾಪ್ತಿಗೆ ಗುಮ್ಮಟ ಬರುತ್ತದೆ. ಅವರ ಗಮನಕ್ಕೆ ತಂದು ಸರಿಪಡಿಸಲು ತಿಳಿಸುತ್ತೇನೆ. ಇದು ಬಹಳ ವರ್ಷಗಳ ಹಳೆಯ ಕಟ್ಟಡ ಕೆಲವೊಂದು ಲೋಪದೋಷ ಆಗಿರಬಹುದು ಎಂದರು.

ಗುಮ್ಮಟದಲ್ಲಿ ಸಣ್ಣ ಮಟ್ಟದ ಬಿರುಕು ಕಾಣಿಸಿಕೊಂಡಿದೆ. ಮಳೆ ಜೋರಾಗಿ ಬಂದರೆ ನೀರು ಕೂಡ ಲೀಕೇಜ್ ಆಗುತ್ತಿದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆ ಅಧಿಕಾರಿಗಳೊಂದಿಗೆ ಇಂದು ಸ್ಪೀಕರ್ ಯು.ಟಿ ಖಾದರ್ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!