Monday, June 15, 2026
spot_imgspot_img
spot_imgspot_img

ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ – ಕೆ.ಎಸ್ ಈಶ್ವರಪ್ಪ, ಹರೀಶ್ ಪೂಂಜ ವಿರುದ್ಧ ಎಸ್ ಡಿ ಪಿ ಐ ವಿಟ್ಲ ವಲಯ ವಿಟ್ಲ ಪೊಲೀಸ್ ಠಾಣೆಗೆ ದೂರು

- Advertisement -
- Advertisement -

ವಿಟ್ಲ: ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಸ್ ಡಿ ಪಿ ಐ ವಿಟ್ಲ ವಲಯ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಳ್ತಂಗಡಿಯಲ್ಲಿ ಇತ್ತೀಚೆಗೆ ಬಿಜೆಪಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ ಅವರು ಗೋವನ್ನು ಮುಟ್ಟುವವರ ಕೈ ಕಡಿಯಿರಿ, ನಾಲಗೆ ಸೀಳಿರಿ ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದು, ಶಾಸಕ ಹರೀಶ್ ಪೂಂಜ ಅವರು ಒಂದು ಸಮುದಾಯವನ್ನು ಅವಹೇಳನಾಕಾರಿಯಾಗಿ ಮತ್ತು ಕೋಮು ದ್ವೇಷ ಹರಡುವ ರೀತಿಯಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!