ಉಡುಪಿ:– ಪ್ರತೀ ವರ್ಷದಿಂತೆ ಈ ಬಾರಿಯೂ ನೂಲ ಹುಣ್ಣಿಮೆಯಂದು ಕರಾವಳಿಯಲ್ಲಿ ವಿವಿಧ ಕಡೆಗಳಲ್ಲಿ ಸಮುದ್ರ ಪೂಜೆ ನೆರವೇರಿತು. ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರರ ಸಂಘ ಆಯೋಜಿಸಿದ್ದ ಸಮುದ್ರ ಪೂಜೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ನೆರವೇರಿಸಲಾಯಿತು.


ಕಡಲ ಮಕ್ಕಳಿಂದ ಜಿಲ್ಲೆಯ ವಿವಿದೆಡೆ ಮೀನುಗಾರರು ಸಮುದ್ರಪೂಜೆ ಸಹಿತವಾಗಿ ಕ್ಷೀರಾಭಿಷೇಕ ನಡೆಸಿದರು. ಪ್ರತೀ ವರ್ಷ ನೂಲ ಹುಣ್ಣಿಮೆಯಂದು ಕರಾವಳಿಯಲ್ಲಿ ಸಮುದ್ರ ಪೂಜೆ ನಡೆಯುತ್ತಿದ್ದು ಆ ಮೂಲಕ ಮೀನುಗಾರರು ಹೇರಳ ಮತ್ಸ್ಯ ಸಂಪತ್ತು ದೊರಕಿಸುವಂತೆ ಮತ್ತು ಮೀನುಗಾರಿಕೆಯ ವೇಳೆ ಯಾವುದೇ ರೀತಿಯ ತೊಂದರೆಗಳು ಆಗದಿರಲೆಂಬ ಪ್ರಾರ್ಥನೆಯೊಂದಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ಪೂಜೆ ನೆರವೇರಿಸುತ್ತಾರೆ.



ಈ ವೇಳೆ ಮಾತನಾಡಿದ ಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣರು ಕೊರೊನಾ ಲಾಕ್ ಡೌನ್ ನಿಂದಾಗಿ ಕಳೆದ ಮೀನುಗಾರಿಕಾ ಋುತುವಿನಲ್ಲಿ ಸರಿಯಾದ ಮೀನುಗಾರಿಕೆ ನಡೆಯದೇ ಇರುವುದರಿಂದ, ಸಂಕಷ್ಟಕ್ಕೀಡಾಗಿರುವ ಮೀನುಗಾರರು ಈ ಭಾರಿ ಯಾವುದೇ ತೊಂದರೆ ಇಲ್ಲದೆ ಮೀನುಗಾರಿಕೆಗೆ ನಡೆಸಲು ಸಮುದ್ರ ರಾಜನಲ್ಲಿ ಪ್ರಾರ್ಥಿಸಲಾಯಿತು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಶ್ರೀ ಕೆ ರಘುಪತಿ ಭಟ್, ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
