- Advertisement -
- Advertisement -
ವಿಟ್ಲ: ವಿಟ್ಲದ ಒಕ್ಕೆತ್ತೂರು ಯುವಕನಲ್ಲಿ ಮಂಗಳವಾರ ಕೊರೊನಾ ಸೋಂಕು ಪತ್ತೆಯಾಗಿದ್ದು, 31 ವರ್ಷದ ಯುವಕ ಮೂರು ತಿಂಗಳ ಹಿಂದೆ ದುಬೈಯಿಂದ ಊರಿಗೆ ಬಂದಿದ್ದ. ಈ ಸಂದರ್ಭ ಆತನಲ್ಲಿ ಯಾವುದೇ ರೋಗದ ಲಕ್ಷಣಗಳು ಬಂದಿರಲಿಲ್ಲ. ಎರಡು ದಿನಗಳಿಂದ ಆತನಿಗೆ ಜ್ವರ, ಕೆಮ್ಮು ಉಂಟಾದ ಹಿನ್ನೆಲೆಯಲ್ಲಿ ಸೋಮವಾರ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿದ್ದು, ಅಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಮನೆಯಲ್ಲಿ ಇರುವಂತೆ ಸೂಚಿಸಲಾಗಿದೆ.

ಮಂಗಳವಾರ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಬಳಿಕ ಆರೋಗ್ಯ ಇಲಾಖೆ ನೇತೃತ್ವದಲ್ಲಿ ವೆನ್ಲಾಕ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಆ ಹಿನ್ನೆಲೆಯಲ್ಲಿ ಮನೆಯನ್ನು ವಿಟ್ಲ ಪಟ್ಟಣ ಪಂಚಾಯತ್ ಅಧಿಕಾರಿಗಳು ತೆರಳಿ ಸೀಲ್ ಡೌನ್ ಮಾಡಲಾಗಿದೆ.ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಮಾಲಿನಿ ಹಾಗು ಸಿಬ್ಬಂದಿಗಳ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ.




- Advertisement -